Surah 114 An-Nas ಅಧ್ಯಾಯ 114: ಅನ್ನಾಸ್ (ಮಾನವರು)
Listen now
Description
ಅಧ್ಯಾಯ 114: ಅನ್ನಾಸ್ (ಮಾನವರು) ಸೂಕ್ತ : 1 ಹೇಳಿರಿ; ನಾನು ಮಾನವರ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ. ಸೂಕ್ತ : 2 ಅವನು (ಅಲ್ಲಾಹನು) ಮಾನವರ ದೊರೆ, ಸೂಕ್ತ : 3 ಮಾನವರ ಆರಾಧ್ಯ. ಸೂಕ್ತ : 4 (ಮನಸ್ಸಿನಲ್ಲಿ) ಗೊಂದಲ ಬಿತ್ತಿ ಹಿಂದೆ ಸರಿದು ಬಿಡುವವನ (ಶೈತಾನನ) ಕೆಡುಕಿನಿಂದ (ನಾನು ಅಲ್ಲಾಹನ ರಕ್ಷಣೆ ಕೋರುತ್ತೇನೆ). ಸೂಕ್ತ : 5 ಅವನು ಮಾನವರ ಮನದಲ್ಲಿ ಗೊಂದಲಗಳನ್ನು ಬಿತ್ತುತ್ತಾನೆ. ಸೂಕ್ತ : 6 ಅಂಥವನು ಜಿನ್ನ್‌ಗಳ ಪೈಕಿ ಇರಬಹುದು ಮತ್ತು ಮಾನವರ ಪೈಕಿಯೂ ಇರಬಹುದು. (via) Quran in Kannada(ಕನ್ನಡದಲ್ಲಿ ಕುರ್ ಆನ್) app https://play.google.com/store/apps/details?id=com.nzymic.kquran
More Episodes
Published 04/14/21
ಅಧ್ಯಾಯ 113: ಅಲ್ ಫಲಕ್(ಮುಂಜಾವು) ಸೂಕ್ತ : 1 ಹೇಳಿರಿ; ನಾನು, ಪ್ರಭಾತದ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ - ಸೂಕ್ತ : 2 ಅವನು ಸೃಷ್ಟಿಸಿರುವ ಎಲ್ಲವುಗಳ ಕೆಡುಕಿನಿಂದ (ಸುರಕ್ಷಿತನಾಗಿರಲು) ಸೂಕ್ತ : 3 ಮತ್ತು ಕತ್ತಲೆಯು ಆವರಿಸುವಾಗ, ಅದರ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ) ಸೂಕ್ತ : 4 ಮತ್ತು ಗಂಟುಗಳಲ್ಲಿ ಊದುವ (ಮಂತ್ರವಾದಿ) ಮಹಿಳೆಯರ...
Published 04/14/21
ಅಧ್ಯಾಯ 112: ಅಲ್ ಇಖ್ಲಾಸ್ (ಏಕಾಗ್ರತೆ) ಸೂಕ್ತ : 1 ಹೇಳಿರಿ; ಅವನು ಅಲ್ಲಾಹು ಏಕಮಾತ್ರನು (ಅದ್ವಿತೀಯನು) ಸೂಕ್ತ : 2 ಅಲ್ಲಾಹನು ಎಲ್ಲ ಅಗತ್ಯಗಳಿಂದ ಮುಕ್ತನು. ಸೂಕ್ತ : 3 ಅವನಿಗೆ ಯಾರೂ ಜನಿಸಿಲ್ಲ ಅವನು ಯಾರಿಗೂ ಜನಿಸಿದವನಲ್ಲ. ಸೂಕ್ತ : 4 ಯಾರೂ ಅವನಿಗೆ ಸರಿಸಾಟಿಯಾಗಲು ಸಾಧ್ಯವಿಲ್ಲ. (via) Quran in Kannada(ಕನ್ನಡದಲ್ಲಿ ಕುರ್ ಆನ್) app ...
Published 04/14/21